ನವದೆಹಲಿ, ಅ 02 (DaijiworldNews/MS): ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ, ಮೋಸ್ಟ್ ವಾಂಟೆಡ್ ಲಿಸ್ಟ್ನಲ್ಲಿರುವ ಶಂಕಿತ ಐಸಿಸ್ ಭಯೋತ್ಪಾದಕನನ್ನು ದೆಹಲಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ದೊಡ್ಡ ಕಾರ್ಯಾಚರಣೆಯ ಸಂದರ್ಭದಲ್ಲಿ ಬಂಧಿಸಲಾಗಿದೆ.
ಮೋಸ್ಟ್ ವಾಂಟೆಡ್ ಐಸಿಸ್ ಉಗ್ರ ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮನನ್ನು ದೆಹಲಿ ಪೊಲೀಸರ ವಿಶೇಷ ಸೆಲ್ ರಾಷ್ಟ್ರ ರಾಜಧಾನಿಯಲ್ಲಿದ್ದ ಅಡಗುತಾಣದಿಂದ ಬಂಧಿಸಿದೆ.
ಐಸಿಸ್ ಭಯೋತ್ಪಾದಕ ಮೊಹಮ್ಮದ್ ಶಹನವಾಜ್ ಅಲಿಯಾಸ್ ಶಫಿ ಉಜ್ಜಮಾ ಎನ್ಐಎಯ ಮೋಸ್ಟ್ ವಾಂಟೆಡ್ ಲಿಸ್ಟ್ನಲ್ಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ ಆತನ ತಲೆಗೆ 3 ಲಕ್ಷ ರೂ. ಘೋಷಣೆ ಮಾಡಿತ್ತು. ಮೂಲಗಳ ಪ್ರಕಾರ ಈತ ಪುಣೆ ಐಸಿಸ್ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಎನ್ನಲಾಗಿದ್ದು, ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಶಹನವಾಜ್ ದೆಹಲಿಯ ನಿವಾಸಿಯಾಗಿದ್ದ. ಪುಣೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ದೆಹಲಿ ಪೊಲೀಸರು ಬಂಧಿಸಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.