ಅಸ್ಸಾಂ, ಅ 03 (DaijiworldNews/AK): ಬಾಲ್ಯವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ 800 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ವರ್ಷದ ಆರಂಭದಲ್ಲಿ ಮೊದಲ ಸುತ್ತಿನ ಬಾಲ್ಯ ವಿವಾಹ ಸಂಬಂಧಿತ ಪ್ರಕರಣಗಳ ತನಿಖೆ ನಡೆಸಲಾಗಿದ್ದು, ಅಂದೂ ಸಾವಿರಾರು ಮಂದಿಯನ್ನ ಬಂಧಿಸಲಾಗಿತ್ತು.
ಬಾಲ್ಯವಿವಾಹದ ವಿರುದ್ಧ ಕಟ್ಟು ನಿಟ್ಟಿನ ಕ್ರಮ ವಹಿಸ ಬೇಕೆಂಬ ನಿಟ್ಟಿನಲ್ಲಿ ಅಸ್ಸಾಂ ಪೊಲೀಸರು ವಿಶೇಷ ಕಾರ್ಯಾಚರಣೆಯಲ್ಲಿ 800 ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಮುಂಜಾನೆಯಿಂದಲೇ ಪ್ರಾರಂಭವಾಯಿತೆಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ತಮ್ಮ ಎಕ್ಸ್(ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಬಂಧಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ, ಕಳೆದ ಐದು ವರ್ಷಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಟ್ಟು 3,907 ಜನರನ್ನು ಬಂಧಿಸಲಾಗಿದೆ.
ಸುಮಾರು 3,319 ಜನರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ, 2012 ರ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಸೆಪ್ಟೆಂಬರ್ 11 ರಂದು ಅಸ್ಸಾಂ ಅಸೆಂಬ್ಲಿಯಲ್ಲಿ ಮಾತನಾಡಿದ ಸಿಎಂ ಶರ್ಮಾ ತಿಳಿಸಿದ್ದಾರೆ.