ಯಾದಗಿರಿ, ಅ 03 (DaijiworldNews/AK):ಕಾಂಗ್ರೆಸ್ನವರೇ ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಕುತಂತ್ರ ಮಾಡ್ತಿದ್ದಾರೆ. ಆಡಳಿತ ಮಾಡಲು ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ನವರೇ ಬಿಡುತ್ತಿಲ್ಲ ಎಂದು ಸಿಎಂ ಪರ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಬ್ಯಾಟಿಂಗ್ ಮಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಒಬ್ಬೊಬ್ಬರಾಗಿ ಶಾಸಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿಕೆ ಶಿವಕುಮಾರ್ ಷಡ್ಯಂತ್ರ ಮಾಡುತ್ತಿದ್ದಾರೆ. ಹೀಗಾಗಿ, ತಮ್ಮದೇ ಹಾದಿಯಲ್ಲಿ ಸಿಎಂ ಸಿದ್ದರಾಮಯ್ಯ ಹೋಗುತ್ತಿದ್ದಾರೆ. ಕರ್ನಾಟಕದ ಜನರು, 135 ಶಾಸಕರ ಬೆಂಬಲ ಸಿಎಂ ಸಿದ್ದರಾಮಯ್ಯನವರಿಗೆ ಇದೆ. ಹೀಗಾಗಿ, ಸಿದ್ದರಾಮಯ್ಯ ಒಳ್ಳೆಯ ಆಡಳಿತ ಕೊಟ್ಟು ಧೈರ್ಯವಾಗಿ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸಿಎಂಪರ ಹೇಳಿಕೆ ನೀಡಿದ್ದಾರೆ.
ಲಿಂಗಾಯತರನ್ನು ಸಿಎಂ ಮಾಡುತ್ತೇವೆಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿರುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬ್ಯಾಟಿಂಗ್ ಮಾಡಿದ್ದಾರೆ. ಸಿದ್ದರಾಮಯ್ಯನವರೇ, ನೀವು ಯಾವ ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪನವರಿಗೂ ಹೆದರಬೇಡಿ. ಜಾತಿ – ಜನಾಂಗದ ಮೇಲೆ ಯಾರೂ ಸಿಎಂ ಆಗಲ್ಲ. ಯಾರ ಸಮರ್ಥ ಆಡಳಿತ ಕೊಡುತ್ತಾರೋ ಅವರು ಸಿಎಂ ಆಗಬೇಕು ಎಂದರು.