ನವದೆಹಲಿ, ಅ 06 (DaijiworldNews/MS): ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಮತ್ತು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಸ್ಫೋಟಿಸುವುದಾಗಿ ಬೆದರಿಕೆಯ ಇಮೇಲ್ ಮೂಲಕ ಕೇಂದ್ರ ಭದ್ರತಾ ಏಜೆನ್ಸಿಗೆ ಇಮೇಲ್ ಬಂದಿದೆ.
ಮಾತ್ರವಲ್ಲದೇ ಇಮೇಲ್ನಲ್ಲಿ 500 ಕೋಟಿ ರೂ. ನೀಡುವಂತೆ ಬೇಡಿಕೆ ಇರಿಸಲಾಗಿದ್ದು ಹಾಗೂ ಜೈಲಿನಲ್ಲಿರುವ ಭಯೋತ್ಪಾದಕ ಲಾರೆನ್ಸ್ ಬಿಷ್ಣೋಯ್ ನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತಕ್ಷಣವೇ ಮುಂಬೈ ಪೊಲೀಸರಿಗೆ ಬೆದರಿಕೆ ಇಮೇಲ್ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಐದು ವಿಶ್ವಕಪ್ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲಾಗಿರುವುದರಿಂದ ಮುಂಬೈ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.