ನವದೆಹಲಿ, ಅ 09 (DaijiworldNews/HR): ಕಾಂಗ್ರೆಸ್ ಪಕ್ಷ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ರಾಜ್ಯಗಳಲ್ಲಿ ಜಾತಿ ಗಣತಿಗೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿ ಜಾತಿ ಗಣತಿ ಕುರಿತು ಚರ್ಚಿಸಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸಾಮೂಹಿಕವಾಗಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.
ಇನ್ನು ಹಿಮಾಚಲ ಪ್ರದೇಶ, ರಾಜಸ್ಥಾನ, ಕರ್ನಾಟಕ ಮತ್ತು ಛತ್ತೀಸ್ಗಢದಲ್ಲಿ ಜಾತಿ ಗಣತಿ ನಡೆಸಲು ನಮ್ಮ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ ಎಂದಿದ್ದಾರೆ.