ನವದೆಹಲಿ, ಎ13(SS): ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಾರಣಾಸಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಿಯಾಂಕಾ ಗಾಂಧಿ ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು. ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಒಪ್ಪಿಗೆ ನೀಡಬೇಕಿದೆ. ಪ್ರದಾನಿ ನರೇಂದ್ರ ಮೋದಿ ಅವರಿಗೆ ವಾರಣಾಸಿಯಲ್ಲಿ ಸದ್ಯದ ಮಟ್ಟಿಗೆ ಪ್ರಬಲ ಸ್ಪರ್ಧಿ ಇಲ್ಲ ಎಂದು ಹೇಳಲಾಗುತ್ತಿತ್ತು. ಹೀಗಾಗಿ, ಮೋದಿ ಅವರ ಗೆಲುವು ಶತಸಿದ್ಧ ಎಂದು ಹೇಳಲಾಗುತ್ತಿತ್ತು.
2014ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭೆಯಿಂದ ಮೊದಲ ಬಾರಿಗೆ ಸ್ಪರ್ಧಿಸಿದ್ದರು. ಮೋದಿಗೆ ಎದುರಾಗಿ ಎಎಪಿ ಪಕ್ಷದ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಸ್ಪರ್ಧಿಸಿದ್ದು 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮೋದಿ ವಿರುದ್ಧ ಸೋತಿದ್ದರು. ಇದೀಗ ಇದಕ್ಕೆ ತಡೆಯೊಡ್ಡಲು ಪ್ರಿಯಾಂಕಾ ವಾದ್ರಾ ವಾರಣಾಸಿಯಿಂದಲೇ ಕಣಕ್ಕಿಳಿಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.