ನವದೆಹಲಿ, ಅ 11 (DaijiworldNews/HR): ತಮಿಳುನಾಡಿಗೆ ಅಕ್ಟೋಬರ್ 16 ರಿಂದ 31ರ ವರೆಗೆ ಪ್ರತಿ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ ಅಂದ್ರೆ ಅಕ್ಟೋಬರ್ 16ರಿಂದ 31ರ ವರೆಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ನಡೆದ ಸಭೆಯಲ್ಲಿ ಸಮಿತಿಯ ಅಧ್ಯಕ್ಷ ವಿನೀತ್ ಗುಪ್ತಾ ಶಿಫಾರಸ್ಸು ಮಾಡಿದ್ದಾರೆ.
ಇನ್ನು ಈ ಹಿಂದೆ ಸೆಪ್ಟೆಂಬರ್ 29 ರಂದು 15 ದಿನಗಳವರೆಗೆ ಪ್ರತಿ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು.