ಬೆಂಗಳೂರು, ಅ 11 (DaijiworldNews/HR): ನನ್ನ ಕ್ಷೇತ್ರದ ಕೆಲಸಕ್ಕಾಗಿ ನಾನು ಯಾರ ಬಳಿ ಬೇಕಾದರೂ ಹೋಗುತ್ತೇನೆ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ 126 ಕೋಟಿ ರೂ. ಅನುದಾನವನ್ನು ವಾಪಸ್ ಪಡೆದ ಹಿನ್ನೆಲೆ ಶಾಸಕ ಮುನಿರತ್ನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ಕೈಗೊಂಡಿದ್ದು ಬಳಿಕ ಯುಡಿಯೂರಪ್ಪ ಅವರ ಮನವಿ ಮೇರೆಗೆ ಪ್ರತಿಭಟನೆ ಕೈಬಿಟ್ಟ ಮುನಿರತ್ನ ಅರಮನೆ ಮೈದಾನಕ್ಕೆ ತೆರಳಿ ಡಿಕೆಶಿ ಕಾಲಿಗೆ ಬಿದ್ದು ಅನುದಾನ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದರು.
ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಶಾಸಕರು ಮಾತುಕತೆ ನಡೆಸಿದ ಅವರು, ಮಾತುಕತೆಯ ವೇಳೆ ಅನುದಾನ ಬಿಡುಗಡೆ ಮಾಡುವ ಭರವಸೆಯನ್ನು ನೀಡಿದ್ದು, ನಿಮ್ಮ ಕ್ಷೇತ್ರದ ಜವಾಬ್ದಾರಿ ನನ್ನದು ಎಂದಿದ್ದಾರೆ.