ಆಂಧ್ರಪ್ರದೇಶ, ಅ 11 (DaijiworldNews/AK): ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಲಾಗಿದೆ. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 16ರವರೆಗೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸದಂತೆ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ.
ಇನ್ನು ಅಂಗಲ್ಲು ಹಿಂಸಾಚಾರ ಪ್ರಕರಣದಲ್ಲಿ ನಾಳೆಯವರೆಗೆ ಯಾರನ್ನೂ ಬಂಧಿಸದಂತೆ ಸಿಐಡಿಗೆ ನ್ಯಾಯಾಲಯ ಸೂಚನೆ ನೀಡಿದೆ. ಸಿಐಡಿ ವಿಜಯವಾಡ ಎಸಿಬಿ ನ್ಯಾಯಾಲಯ ಸಲ್ಲಿಸಿದ್ದ ಇನ್ನರ್ ರಿಂಗ್ ರೋಡ್ ಅರ್ಜಿಗೆ ಹೈಕೋರ್ಟ್ ತಡೆ ನೀಡಿದೆ.