ನವದೆಹಲಿ, ಅ 12 (DaijiworldNews/HR): ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ದೆಹಲಿ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಹಂತಕ ಭಯೋತ್ಪಾದಕ ಅರಿಜ್ ಖಾನ್ ಅವರ ಮರಣದಂಡನೆಯನ್ನು ನ್ಯಾಯಾಲಯವು ಜೀವಾವಧಿಗೆ ಇಳಿಸಿದೆ ಎನ್ನಲಾಗಿದೆ.
ಇನ್ನು 2008ರಲ್ಲಿ ದೆಹಲಿ ಪೊಲೀಸ್ ಇನ್ಸ್ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರನ್ನು ಎನ್ಕೌಂಟರ್ ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿದ್ದು, 2021ರಲ್ಲಿ ದೆಹಲಿಯ ಸಾಕೇತ್ ನ್ಯಾಯಾಲಯವು ಬಾಟ್ಲಾ ಹೌಸ್ ಎನ್ಕೌಂಟರ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಮರಣದಂಡನೆ ತೀರ್ಪನ್ನು ನೀಡಿತು.