ಬೆಂಗಳೂರು, ಅ 13 (DaijiworldNews/AK): ಸರ್ಕಾರ ಒಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಠ ಶೇ.50 ರಷ್ಟು ಬಾಕಿ ಬಿಲ್ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಅವರು, ಬಾಕಿ ಮೊತ್ತ ಬಿಡುಗಡೆ ಮಾಡಲು ಯಾವುದೇ ರೀತಿಯ ಸಾಬೂನುಗಳನ್ನು ಹೇಳಬಾರದು, ತನಿಖೆ ಆಯೋಗದ ಹೆಸರಿನಲ್ಲಿ ಮುಂದೂಡಬಾರದು ಇಲ್ಲವಾದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರಾಜ್ಯ ಸರ್ಕಾರದಿಂದ ಇನ್ನೂ 20 ಸಾವಿರ ಕೋಟಿ ರೂ. ಬಾಕಿ ಬರಬೇಕಿದೆ. ಜಲಸಂಪನ್ಮೂಲ, ಸಣ್ಣ ನೀರಾವರಿ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳಿಂದ ಬಾಕಿ ಬರಬೇಕು. ಇಂದಿನಿಂದ ಸರ್ಕಾರಕ್ಕೆ 30 ದಿನ ಗಡವು ನೀಡುವುತ್ತೇವೆ. ಕರೆದು ಮಾತನಾಡಿ ಬಗೆ ಹರಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಎಂದರು.