ಧಾರವಾಡ, ಅ 13 (DaijiworldNews/HR): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಆತ್ಮಹತ್ಯೆ ಹೆಚ್ಚಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈ ಹಿಂದಿನ ಸರ್ಕಾರಗಳೆಲ್ಲ ರಾಜ್ಯದ ರೈತರಿಗೆ ಅನೇಕ ಯೋಜನೆಗಳ ಕೊಡುಗೆ ನೀಡಿದ್ದವು. ಆದ್ರೆ ಹಿಂದಿನ ಸರ್ಕಾರಗಳ ಆದ್ಯತೆಗಳನ್ನು ಕಾಂಗ್ರೆಸ್ ಸರ್ಕಾರ ಬಂದ್ ಮಾಡಿದ್ದು, ಆತ್ಮಹತ್ಯೆಯೊಂದೇ ದಾರಿಯಾಗಿದೆ ಎಂದರು.
ಇನ್ನು ರೈತರು ವಿದ್ಯುತ್ ಇಲ್ಲದೇ ಪರದಾಡುವಂತಾಗಿದ್ದು ಮಕ್ಕಳ ವಿದ್ಯಾಭ್ಯಾಸಕ್ಕೂ ಕರೆಂಟ್ ಇಲ್ಲ, ಬರ ಪರಹಾರ ಇಲ್ಲ, ಬೆಳೆ ನಷ್ಟಕ್ಕೆ ಪರಿಹಾರ ಇಲ್ಲ. ರಾಜ್ಯ ಕತ್ತಲೆಯಲ್ಲಿ ಕಳೆಯುತ್ತಿದೆ ಎಂದು ಆರೋಪಿಸಿದ್ದಾರೆ.
135 ಜನ ಗೆದ್ದು ಬಹುಮತದ ಸರ್ಕಾರ ಬಂದಿದೆ. ಆದರೂ ಏನೂ ಆಗುತ್ತಿಲ್ಲ. ಕಾಂಗ್ರೆಸ್ ಶಾಸಕರೇ 5 ಗ್ಯಾರಂಟಿ ಬಗ್ಗೆ ಅಪಸ್ವರ ಎತ್ತಿದ್ದಾರೆ ಎಂದರು.