ಬೆಂಗಳೂರು, ಅ 13 (DaijiworldNews/HR): ಕರ್ನಾಟಕದ ಹಣವನ್ನು ಪಂಚರಾಜ್ಯಗಳ ಚುನಾವಣೆಗೆ ಬಳಕೆ ಮಾಡುತ್ತಾರೆಂಬ ಶಾಸಕ ಮುನಿರತ್ನ ಅವರ ಆರೋಪ ಸುಳ್ಳು, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು,ಕರ್ನಾಟಕದ ಹಣವನ್ನು ಪಂಚರಾಜ್ಯಗಳ ಚುನಾವಣೆಗೆ ಬಳಕೆ ಮಾಡುತ್ತಾರೆಂಬ ಶಾಸಕ ಮುನಿರತ್ನ ಅವರ ಆರೋಪ ಸುಳ್ಳು ಅದನ್ನು ಅವರು ನೋಡಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಆರೋಪ ಮಾಡೋಕೆ ಏನು?. ಎಲ್ಲ ಆರೋಪಗಳು ಸುಳ್ಳುಗಳಿಂದ ಕೂಡಿವೆ. ಬಿಜೆಪಿ ಶಾಸಕರ ಆರೋಪಗಳು ನಿಜವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.