ನವದೆಹಲಿ, ಅ 15 (DaijiworldNews/AK): ಸೂರ್ಯಯಾನ, ಚಂದ್ರಯಾನದ ನಂತರ ಇದೀಗ ಇಸ್ರೋ ಮತ್ತೊಂದು ಇತಿಹಾಸ ಬರೆಯಲು ಸಜ್ಜಾಗಿದೆ.ಮಾನವ ಸಹಿತ ಗಗನಯಾನಕ್ಕೆ ಇಸ್ರೋ ಸಿದ್ದಗೊಂಡಿದೆ, ಇದೇ ತಿಂಗಳ ಕೊನೆಯಲ್ಲಿ ಪರೀಕ್ಷಾರ್ಥ ಉಡಾವಣೆ ನಡೆಸಲಿದೆ.
ಈಗಾಗಲೇ ಈ ಕುರಿತು ಇಸ್ರೋ ಕೆಲ ಚಿತ್ರಗಳನ್ನು ಸಹ ಬಿಡುಗಡೆ ಮಾಡಿದೆ. ಮನುಷ್ಯನನ್ನು ಬಾಹ್ಯಾಕಾಶಕ್ಕೆ ಕಳಿಸುವ ಮುನ್ನ ಕೆಲವು ಅಂತರಾಷ್ಟ್ರೀಯ ಪ್ರಕ್ರಿಯೆ ಪಾಲಿಸಬೇಕಾಗುತ್ತದೆ. ಮನುಷ್ಯನನ್ನು ಆಕಾಶಕ್ಕೆ ಕರೆದುಕೊಂಡು ಹೋಗುವ ಯೂನಿಟ್ಗೆ ಪ್ಯಾಡ್ ಅಬಾಟ್ ಎಂದು ಕರೆಯಲಾಗುತ್ತದೆ. ಈ ಪ್ಯಾಡ್ ಅಬಾಟ್ ಅನ್ನು ರಾಕೆಟ್ ಇರಿಸಿ ಪ್ರಯೋಗ ಮಾಡಲಾಗುತ್ತಿದೆ. ಇದನ್ನೇ ಗಗನಯಾನTest Vehicle Development ಬಾಹ್ಯಾಕಾಶ ನೌಕೆ ಉಡ್ಡಯನ ಎನ್ನಲಾಗುತ್ತದೆ.
ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಕ್ರ್ಯೂ ಎಸ್ಕೇಪ್ ಸಿಸ್ಟಮ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಕಾರ್ಯಾಚರಿಸುತ್ತವೆಯೇ ಎನ್ನುವುದು ಖಚಿತ ಪಡಿಸಬಹುದಾಗಿದೆ. ಗಗನಯಾತ್ರಿಗಳ ಸುರಕ್ಷತೆಯನ್ನು ಪರೀಕ್ಷೆಯಿಂದ ಖಾತ್ರಿಯಾಗಲಿದೆ. ಈ ಮಾನವಸಹಿತ ಗಗನಯಾನಕ್ಕೂ ಮುನ್ನ ಮೂರು ಟೆಸ್ಟ್ಗಳಿವೆ.
ಮುಂದಿನ ವರ್ಷ ಮತ್ತೊಂದು ಪರೀಕ್ಷಾರ್ಥ ಉಡಾವಣೆ ನಡೆಸಲಾಗುವುದು. ‘ವ್ಯೋಮ ಮಿತ್ರ’ ಹೆಸರಿನ ಮಹಿಳಾ ರೊಬೋಟ್ ಅನ್ನು ಕಳುಹಿಸಲಾಗುವುದು ಎಂದು ಇಸ್ರೋ ಹೇಳಿದೆ. ನಂತರ ಗಗನಯಾನಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಯೊಜನೆ ಕೂಡ ಮಾಡಿದೆ.