ಹುಬ್ಬಳ್ಳಿ,ಅ 15 (DaijiworldNews/AK): ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬೋಗಸ್ ಆಶ್ವಾಸನೆ ಕೊಟ್ಟು ಜನರಿಗೆ ಕತ್ತಲೆ ಗ್ಯಾರಂಟಿ ಮಾಡಿದೆ.ಜನರ ವಿಚಾರದಲ್ಲಿ ಕಾಂಗ್ರೆಸ್ ಅತ್ಯಂತ ಬೇಜಾಬ್ದಾರಿಯಾಗಿ ವರ್ತಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರದಿಂದ ಕರ್ನಾಟಕಕ್ಕೆ ಅಗತ್ಯಕ್ಕಿಂತ ಹೆಚ್ಚು ವಿದ್ಯುತ್ ಪೂರೈಕೆ ಆಗುತ್ತಿದೆ. ಮೋದಿ ಸರಕಾರ ಬಂದ ನಂತರ ವಿದ್ಯುತ್ ಉತ್ಪಾದನೆ ಹೆಚ್ಚಳ ವಿಚಾರವಾಗಿ ಹಲವು ಕ್ರಮ ಕೈಗೊಳ್ಳಲಾಗಿದ್ದು, ನವೀಕರಿಸಬಹುದಾದ ಇಂಧನ ಮೂಲಗಳಿಗೆ ಆದ್ಯತೆ ನೀಡಲಾಗಿದೆ. ಎಂದರು.
ಕರ್ನಾಟಕಕ್ಕೆ ಕೇಂದ್ರ ಸರಕಾರ ನೀಡಿದ ಭರವಸೆಗಿಂತ ಹೆಚ್ಚಿನ ಕಲ್ಲಿದ್ದಲು ನೀಡಿದ್ದೇವೆ. 39 ಸಾವಿರ ಟನ್ ಕಲ್ಲಿದ್ದಲು ಕೊಡುತ್ತಿದ್ದೇವೆ. ದಿನಕ್ಕೆ 39 ಸಾವಿರ ಟನ್, ಎಲ್ಲ ಸೇರಿ 49 ಸಾವಿರ ಟನ್ ಕಲ್ಲಿದ್ದಲು ಕೊಡುತ್ತಿದ್ದೇವೆ ಎಂದರು.