ಬೆಂಗಳೂರು,ಅ 17 (DaijiworldNews/HR): ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸವರಾಜ ಬೊಮ್ಮಾಯಿ ಅವರಿಗೆ ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.
ಇದಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.