ಬೆಂಗಳೂರು, ಅ 19 (DaijiworldNews/MS): ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಸದ್ಯದಲ್ಲೆ ಸಿಬಿಐ ತನಿಖೆ ಆರಂಭವಾಗಲಿದೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸದಂತೆ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ , ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ," ತಡವಾಗಿ ಅರ್ಜಿ ಸಲ್ಲಿಸಿದ್ದಾರೆ" ಎಂದು ಅವರ ಅರ್ಜಿಯನ್ನು ವಜಾಗೊಳಿಸಿದೆ. ಅದಲ್ಲದೇ ಸಿಬಿಐ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ಕೋರ್ಟ್ ತೆರವುಗೊಳಿಸಿದೆ.
ಇದೇ ವೇಳೆ ಮುಂದಿನ ಮೂರು ತಿಂಗಳವೊಳಗೆ ಪ್ರಕರಣದ ತನಿಖೆಯನ್ನು ಮುಗಿಸಬೇಕು ಅಂಥ ಸಿಬಿಐಗೆ ಸೂಚನೆ ನೀಡಿದೆ. ತನಿಖೆ ನಿಧಾವಾದರೆ ಮತ್ತೆ ಪುನಃ ಆದೇಶ ನೀಡಬೇಕಾಗುತ್ತದೆ ಅಂತ ಇದೇ ವೇಳೆ ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಆದಾಯ ಮೀರಿ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆಪಾದನೆ ಸಂಬಂಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಏಪ್ರಿಲ್ನಲ್ಲಿ ಪೂರ್ಣಗೊಳಿಸಿದ ಏಕಸದಸ್ಯ ಪೀಠ ಆದೇಶವನ್ನು ಕಾಯ್ದಿರಿಸಿತ್ತು.