ಬೆಂಗಳೂರು,ಏ14(AZM):ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಲಾಗಿರುವ ಆಡಿಯೋ ಸಿಡಿಯನ್ನು ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯಿಂದ ಕಣದಲ್ಲಿರುವ ತೇಜಸ್ವಿ ಸೂರ್ಯ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪವಿದೆ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಬಿಜ್ರೇಶ್ ಕಾಳಪ್ಪನವರು ಬಿಜೆಪಿಗೆ ಇದೆಲ್ಲ ತಿಳಿದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯಿಂದ ಕಣದಲ್ಲಿರುವ ತೇಜಸ್ವಿ ಸೂರ್ಯ ಅವರ ವಿರುದ್ದ ಲೈಂಗಿಕ ಕಿರುಕುಳ ನೀಡಿರುವ ಆರೋಪವಿದೆ. ಇದೆಲ್ಲ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ತಿಳಿದಿದೆ ಎಂದು ಹೇಳಿದ್ದಾರೆ.
ಇನ್ನು ಬಿಡುಗಡೆಯಾಗಿರುವ ಆಡಿಯೋದಲ್ಲಿ ತೇಜಸ್ವಿ ಸೂರ್ಯ ಅವರ ಮಾಜಿ ಗೆಳತಿ ಎನ್ನಲಾಗುತ್ತಿರುವ ಡಾ. ಸೋಮ್ ದತ್ ಅವರು ಮಾಧ್ಯಮ ಪ್ರತಿನಿಧಿಯೊಂದಿಗೆ ತೇಜಸ್ವಿ ಸೂರ್ಯ ಅವರಿಗೆ ಸಂಬಂಧಪಟ್ಟ ಕೆಲವು ಮಹತ್ವದ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ. ಇನ್ನು ಇಲ್ಲಿ ತನಕ ತೇಜಸ್ವಿ ಸೂರ್ಯ ಅವರು ಬಿಡುಗಡೆಯಾಗಿರುವ ಆಡಿಯೋ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ.