ಮೈಸೂರು, 23 (DaijiworldNews/HR): ನಾನು ಕೇಂದ್ರದಲ್ಲಿ ಕೃಷಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದು ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ಸುದ್ದಿಯ ವಿಚಾರಕ್ಕೆ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನಾನು ಕೇಂದ್ರದಲ್ಲಿ ಕೃಷಿ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ ಎಂದರು.
ಇನ್ನು ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ ನೀಡುವ ಬಗ್ಗೆ ನನಗೆ ವರಿಷ್ಠರಿಂದಲೂ ಯಾವ ಸೂಚನೆ ಬಂದಿಲ್ಲ. ಇಂತಹ ಸುದ್ದಿ ಹೇಗೆ ಬರುತ್ತಿವೆಯೋ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.