ಜೈಪುರ, ಅ 27 (DaijiworldNews/HR): ವಿಧಾನಸಭೆ ಚುನಾವಣೆಗೆ ಮುನ್ನ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು 7 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.
ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಮತ್ತು ಟ್ಯಾಬ್ಲೆಟ್ಗಳು, ಕಾನೂನಿನ ಮೂಲಕ ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮತ್ತು ಯಾವುದೇ ನೈಸರ್ಗಿಕ ವಿಕೋಪದ ಸಮಯದಲ್ಲಿ ಉಂಟಾದ ನಷ್ಟಗಳಿಗೆ 15 ಲಕ್ಷ ವಿಮಾ ರಕ್ಷಣೆ ಸೇರಿದಂತೆ 7 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ.
ರಾಜಸ್ಥಾನ ವಿಧಾನಸಭೆಯ ಎಲ್ಲಾ 200 ಸ್ಥಾನಗಳಿಗೆ ನವೆಂಬರ್ 25 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.