ಕಲಬುರಗಿ,ಅ 28 (DaijiworldNews/AK): ಕೇಂದ್ರ ಸರ್ಕಾರವು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರ ಹಾಗೂ ಮುಖ್ಯಮಂತ್ರಿ ಪುತ್ರನ ಮನೆ ಮೇಲೆ ಇಡಿ ದಾಳಿ ನಡೆಸುತ್ತಿರುವ ಹಿನ್ನಲೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವೇ ತಕ್ಕ ಉತ್ತರ ನೀಡಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಇಡಿ ದಾಳಿ ಮಾಡಿರುವ ತಪ್ಪಿನ ಅರಿವು ಚುನಾವಣಾ ಫಲಿತಾಂಶ ನಂತರ ಕೇಂದ್ರ ಸರ್ಕಾರಕ್ಕೆ ಅಗಲಿದೆ ಎಂದರು.
ಕಾಂಗ್ರೆಸ್ ಪಕ್ಷ ಇಡಿ ಹಾಗೂ ಐಟಿ ಸೇರಿ ಇತರ ಯಾವುದೇ ದಾಳಿಗಳಿಗೆ ಹೆದರುವುದಿಲ್ಲ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ನೆಲೆಗಟ್ಟಿನ ಹಾಗೂ ನೈತಿಕ ಮೌಲ್ಯಗಳ ಆಧಾರದ ಮೇಲೆ ರಾಜಕಾರಣ ಮಾಡುತ್ತದೆ. ಪ್ರಜಾಸತ್ತಾತ್ಮಕ ನೆಲೆ ಆಧಾರದ ಮೇಲೆ ಪಕ್ಷ ಚುನಾವಣೆ ಎದುರಿಸಲಿದೆ ಎಂದರು.
ಆದರೆ ಕೇಂದ್ರ ಸರ್ಕಾರಕ್ಕೆ ಚುನಾವಣಾ ಫಲಿತಾಂಶದ ಬಳಿಕ ತಪ್ಪಿನ ಅರಿವಾಗುತ್ತದೆ ಎಂದು ಪರೋಕ್ಷವಾಗು ಟಾಂಗ್ ನೀಡಿದರು.