ಬೆಂಗಳೂರು, ಅ 30 (DaijiworldNews/MR): ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದು, ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಸೇರಿದಂತೆ ಏಕಕಾಲದಲ್ಲಿ 90 ಕಡೆ ದಾಳಿ ನಡೆಸಿದ್ದಾರೆ.
ಬೆಳಗಾವಿ, ಹಾವೇರಿ, ಬೆಂಗಳೂರು, ಕಲಬುರ್ಗಿ, ರಾಯಚೂರು ಚಿತ್ರದುರ್ಗ, ಹಾಸನದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ಏಕಕಾಲಕ್ಕೆ ಮಿಂಚಿನ ದಾಳಿ ನಡೆಸಲಾಗಿದೆ. ಬೆಂಗಳೂರು ನಗರದಲ್ಲೇ ಒಟ್ಟು 11 ಕಡೆ ಲೋಕಾಯುಕ್ತರು ದಾಳಿ ನಡೆಸಿ ಶೋಧ ಆರಂಭಿಸಿದ್ದಾರೆ.
ಹಾವೇರಿಯ RFO ಪರಮೇಶಪ್ಪ ಮೂವರು ಪತ್ನಿಯರ ಮನೆಗಳ ಮೇಲೆ , ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಎಇಇ M.S.ಬಿರಾದಾರ,ಕಾರ್ಮಿಕ ಇಲಾಖೆ ಡೆಪ್ಯೂಟಿ ಡೈರೆಕ್ಟರ್ ಶ್ರೀನಿವಾಸ್, ಅಸಿಸ್ಟೆಂಟ್ ರೆವಿನ್ಯೂ ಆಫೀಸರ್ ಚಂದ್ರಪ್ಪ ಬೀರಜ್ಜನವರ್ ಸೇರಿ ಹಲವು ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.