ಚಿಕ್ಕಮಗಳೂರು, ಅ 30 (DaijiworldNews/HR): ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ.
ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ಪೂರ್ಣೇಶ್ ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಫೈರಿಂಗ್ ಹಾಗೂ ಪೊಲೀಸರ ಮೇಲೆಯೇ ಚಾಕುವಿಂದ ಹಲ್ಲೆಗೈದಾಗ ಬಾಳೆಹೊನ್ನೂರು ಪೊಲೀಸರು ರೌಡಿ ಶೀಟರ್ ಮೇಲೆ ಫೈರಿಂಗ್ ನಡೆಸಿದ್ದಾರೆ.
ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರೂ ಮಾತು ಕೇಳದ ಪೂರ್ಣೇಶ್ ಕಾಲಿಗೆ ಪಿ.ಎಸ್.ಐ. ದಿಲೀಪ್ ಕುಮಾರ್ ಅವರು ಫೈರಿಂಗ್ ಮಾಡಿದ್ದಾರೆ.
ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.