ಬೆಂಗಳೂರು, ಅ 30 (DaijiworldNews/AK/RA):ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
ತಮಿಳುನಾಡಿಗೆ ನವೆಂಬರ್ 1 ರಿಂದ 15 ರವರೆಗೆ ಪ್ರತಿದಿನ ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕಳೆದ ಬಾರಿ ಸಭೆಯಲ್ಲಿ ಆದೇಶಿಸಿತ್ತು. ಇದೀಗ ಆದೇಶದ ಅವಧಿ ಮುಕ್ತಾಯವಾಗುತ್ತಿದ್ದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ಸಭೆ ನಡೆಸಿ ಕರ್ನಾಟಕದಿಂದ ನೀರು ಹರಿಸಲು ಸೂಚನೆ ನೀಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್ ಆದೇಶದಂತೆ ರಚಿಸಲಾದ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಪ್ರತಿ 15 ದಿನಗಳಿಗೊಮ್ಮೆ ಸಭೆಯನ್ನು ನಡೆಸಿ ನೀರು ಬಿಡುವ ವಿಚಾರಕ್ಕೆ ಕರ್ನಾಟಕಕ್ಕೆ ಆದೇಶ ನೀಡಲಾಗುತ್ತಿದೆ.