ಬೆಂಗಳೂರು, ಅ 31(DaijiworldNews/AK): ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್ ಎಂದೆಲ್ಲ ಡಿ.ಕೆ ಶಿವಕುಮಾರ್ ಅವರನ್ನು ಕೆಲ ಗಂಭೀರ ಆರೋಪಗಳನ್ನು ಮಾಡಿ ಏಕವಚನದಲ್ಲಿ ನಿಂದಿಸಿದ್ದ ರಮೇಶ್ ಜಾರಕಿಹೊಳಿ ವಿರುದ್ದ ದೂರು ದಾಖಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್ ಜಾರಕೊಹೊಳಿ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿನ್ನೆ ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆಕ್ಷೇಪರ್ಹ ಪದ ಬಳಕೆ ಮಾಡಿ ಆಧಾರ ರಹಿತ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಏಕವಚನದಲ್ಲಿ ಡಿಕೆ ಶಿವಕುಮಾರ್ ಅವರನ್ನು ನಿಂದಿಸಿದ್ದಕ್ಕೆ ರೊಚ್ಚಿಗೆದ್ದ ಅವರ ಬೆಂಬಲಿಗರು ನಿನ್ನೆ ರಾತ್ರಿ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸದ ಬಳಿ ಬೆಂಬಲಿಗರು ಲಗ್ಗೆ ಇಟ್ಟು ಮನೆ ಗೋಡೆಗಳಿಗೆ ಅವಾಚ್ಯ ಬರಹಗಳಿರುವ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಎಲ್ಲಾ ಬೆಳವಣಿಗಳ ಮಧ್ಯೆ ರಮೇಶ್ ಜಾರಕಿಹೊಳಿ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ಕರೆದಿದ್ದು ಏನು ಹೇಳಲಿದ್ದಾರೆ ಕಾದು ನೊಡಬೇಕಿದೆ.