ನವದೆಹಲಿ, ನ.1 (DaijiworldNews/AK): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್ವೇಸ್ ಲಿಮಿಟೆಡ್ಗೆ ಸಂಬಂಧಿಸಿದ 500 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದ್ದಾರೆ.
ಜೆಟ್ ಏರ್ವೇಸ್ನ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಸೇರಿದಂತೆ ಲಂಡನ್, ದುಬೈ, ಭಾರತದ ಕೆಲವು ರಾಜ್ಯಗಳಲ್ಲಿನ ಕಂಪನಿಗಳ ಹೆಸರಿನಲ್ಲಿ ನೋಂದಾಯಿಸಲಾದ 17 ವಸತಿ ಫ್ಲಾಟ್ಗಳು, ಬಂಗಲೆಗಳು, ವಾಣಿಜ್ಯ ಕಟ್ಟಡಗಳನ್ನು ಮುಟ್ಟುಗೋಳು ಹಾಕಿಕೊಂಡಿದೆ.
ಕನಿಷ್ಠ 538 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಕೇಂದ್ರ ತನಿಖಾ ಸಂಸ್ಥೆ ಜಪ್ತಿ ಮಾಡಿದೆ. ಗೋಯಲ್ ಕುಟುಂಬಸ್ಥರ ಹೊರತಾಗಿ ಜೆಟೈರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಇಡಿ ಅಧಿಕಾರಿಗಳಿಂದ ಮಾಹಿತಿ ನೀಡಿದ್ದಾರೆ.
ಕೆನರಾ ಬ್ಯಾಂಕ್ ಸಲ್ಲಿಸಿರುವ ವಂಚನೆ ಪ್ರಕರಣದಲ್ಲಿ ಇ.ಡಿ ನಿನ್ನೆ ಗೋಯಲ್ ಮತ್ತು ಇತರ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.