ಮೈಸೂರು, ನ.02 (DaijiworldNews/AA): ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಶಿಕ್ಷಕರು ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷಕಿ ಮೀನಾಕ್ಷಿ ಹಾಗೂ ವಿದ್ಯಾರ್ಥಿಗಳಾದ ಧನುಷ್, ಪೃಥ್ವಿ ಮತ್ತು ಗೌತಮ್ ಗಂಭೀರವಾಗಿ ಗಾಯಗೊಂಡವರು.
ಸಿಲಿಂಡರ್ ಸ್ಪೋಟಗೊಂಡ ತಕ್ಷಣವೇ ಗಾಯಾಳುಗಳನ್ನು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಬಿಇಒ ಶೋಭಾ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಘಟನೆ ಸಂಬಂಧಿಸಿದಂತೆ ಟಿ ನರಸೀಪುರ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ತನಿಖೆ ನಡೆಸುತ್ತಿದ್ದಾರೆ.