ತುಮಕೂರು, ನ. 6 (DaijiworldNews/AK): ಪರಿಶಿಷ್ಟರ ಅಂತ್ಯಕ್ರಿಯೆಗೆ ಹಣ ಕೊಡಲೂ ದುಡ್ಡಿಲ್ಲ. ಅಂತ್ಯ ಸಂಸ್ಕಾರಕ್ಕಾಗಿ ಕೊಟ್ಟ ಚೆಕ್ ಕೂಡ ಬೌನ್ಸ್ ಆಗಿದೆ. ಇಷ್ಟರ ಮಟ್ಟಿಗೆ ಸಿದ್ದರಾಮಯ್ಯರ ಸರ್ಕಾರ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬರ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು, ಉಚಿತ ಭಾಗ್ಯಗಳನ್ನು ಕೊಟ್ಟು ಸರ್ಕಾರ ದಿವಾಳಿಯಾಗಿದೆ. ಗೃಹ ಸಚಿವ ಪರಮೇಶ್ವರ್ ಕ್ಷೇತ್ರದಲ್ಲಿ ಪರಿಶಿಷ್ಟರ ಅಂತ್ಯ ಸಂಸ್ಕಾರಕ್ಕೆಂದು ಸರ್ಕಾರದಿಂದ ಕೊಟ್ಟಿದ್ದ ಚೆಕ್ ಕೂಡಾ ಬೌನ್ಸ್ ಆಗಿದ್ದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ಜಿಲ್ಲೆಯಲ್ಲಿ ಇಬ್ಬರು ಸಚಿವರು ಬರ ವೀಕ್ಷಣೆ ಮಾಡಿಲ್ಲ. ಅನಗತ್ಯ ಉಚಿತ ಭಾಗ್ಯ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಸೇರಿದಂತೆ ತೆರಿಗೆ ಜಾಸ್ತಿ ಮಾಡಿ ಸಂಕಷ್ಟ ತಂದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ