ಹಾಸನ, ನ 10 (DaijiworldNews/MS): ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ಹೊಡೆದಿದೆ.
ದೇವಿಯ ದರ್ಶನ ಪಡೆಯಲೆಂದು ಉಚಿತ ದರ್ಶನದ ಸಾಲಿನಲ್ಲಿ ಹಾಕಿದ್ದ ಬ್ಯಾರಿಕೇಡ್ನಲ್ಲಿ ಮಧ್ಯಾಹ್ನ 12.30ರ ವೇಳೆ ವಿದ್ಯುತ್ ಪ್ರವಹಿಸಿದೆ. ಸರತಿ ಸಾಲಿನಲ್ಲಿ ನಿಂತಿದ್ದಾಗ ಕೆಲವರಿಗೆ ವಿದ್ಯುತ್ ಶಾಕ್ ಹೊಡಿದಿದೆ. ಇದರಿಂದ ಭಕ್ತರು ಭಯಗೊಂಡು ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ನೂಕುನುಗ್ಗಲ್ಲು ಉಂಟಾಗಿದೆ.
ಬ್ಯಾರಿಕೇಡ್ ವಿದ್ಯುತ್ ಪ್ರವಹಿಸಿದ್ದನ್ನು ಕಂಡು ಸಾಲಿನಲ್ಲಿದ್ದ ಭಕ್ತರು ಜೀವ ಉಳಿಸಿಕೊಳ್ಳಲು ಭಯಭೀತರಾಗಿ ಎಂದು ಸ್ಥಳದಿಂದ ಓಡಿದ್ದಾರೆ. ಇನ್ನು ಕೆಲವರು ಓಡಲು ಆಗದೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಸ್ವಯಂಸ್ವೇವಕರು ಮತ್ತು ಸ್ಥಳೀಯರು ಕೆಲವರನ್ನು ಹೊರಗೆಳೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 20 ಮಂದಿಗೆ ಕರೆಂಟ್ ಶಾಕ್ ಹೊಡೆದಿದ್ದು, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.