ಹುಬ್ಬಳ್ಳಿ, ನ.16 (DaijiworldNews/PC): ನವೆಂಬರ್ 1ರಿಂದ ಫೋನ್ ಪೇ ಕಂಪನಿಯ ಸಹಯೋಗದಲ್ಲಿ ಯುಪಿಐ ಮೂಲಕ ಹಣ ಸ್ವೀಕೃತಿ ವ್ಯವಸ್ಥೆಯನ್ನು ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್ಸುಗಳಲ್ಲಿ ಆರಂಭಿಸಲಾಗಿದೆ.
ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಸೇರಿದಂತೆ ಯಾವುದೇ ಯುಪಿಐ ಅಪ್ಲಿಕೇಷನ್ ಮೂಲಕ ಹಣ ಪಾವತಿಸಲು ಅವಕಾಶ ಕಲ್ಪಿಸಲಾಗಿತ್ತು. ಸದ್ಯ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ಹಾಗೂ ಸಿಬ್ಬಂದಿಗಳಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಕ್ಕಿದೆ.
ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐಪಾವತಿ ವ್ಯವಸ್ಥೆ ಮಾಡಲಾಗಿದ್ದು ಯಶಸ್ವಿಯಾಗಿದ್ದು. ಈ ಮೂಲಕ ಸಾರಿಗೆ ಬಸ್ಗಳಲ್ಲಿ ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಿದೆ.
ಪೈಲಟ್ ಯೋಜನೆಯಡಿಯಲ್ಲಿ, ಪ್ರತಿ ಕಂಡಕ್ಟರ್ಗೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂಆರ್ ಕೋಡ್ ನೀಡಲಾಗಿದೆ. ಮತ್ತು ಅವರ ಟಿಕೆಟಿಂಗ್ ಯಂತ್ರಗಳನ್ನು ಅದಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ. ಇದರ ಬಗ್ಗೆ ಕಂಡಕ್ಟರ್ ಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ.
ಪ್ರಯಾಣಿಕರು ಫೋನ್ಪೇ, ಗೂಗಲ್ ಪೇ ಅಥವಾ ಇತರ ಯುಪಿಐ ಅಪ್ಲಿಕೇಶನ್ಗಳ ಮೂಲಕ ಹಣ ಪಾವತಿಸಿ ಟಿಕೆಟ್ ಖರೀದಿಸುತ್ತಿದ್ದಾರೆ ಎಂದು ಎಂಡಿ ಭರತ್ ಅವರು ವಿವರಿಸಿದ್ದಾರೆ.