ಚಿಕ್ಕಮಗಳೂರು, ನ 18 (DaijiworldNews/RA): ರಾಜ್ಯ ಕಾಂಗ್ರೆಸ್ ಸರಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಪೋಸ್ಟರ್ ಸಮರ ಸಾರಿದ್ದು, ಚಿಕ್ಕಮಗಳೂರು ನಗರದಾದ್ಯಂತ ವ್ಯಂಗ್ಯಚಿತ್ರಗಳ ಪೋಸ್ಟರ್ ಗಳನ್ನು ಹಾಕುವ ಮೂಲಕ ಕೌಂಟರ್ ಕೊಟ್ಟಿದೆ.
ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸುವ ಮೂಲಕ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದೆ.
ಇಡೀ ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆ , ಕೆ.ಜೆ.ಜಾರ್ಜ್ ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ, ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿರೋ ಸೋನಿಯಾ ಗಾಂಧಿ, ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. "ಇರೀ ಮ್ಯಾಮ್" ಎನ್ನುತ್ತಿರೋ ಇಂಧನ ಸಚಿವ ಹೀಗೆ ಹಲವು ರೀತಿಯ ಪೋಸ್ಟರ್ ಗಳನ್ನು ಅಂಟಿಸಿ ಸರಕಾರದ ನಡೆ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.
ಮಾತ್ರವಲ್ಲ ಎರಡು ದಿನಗಳ ಹಿಂದೆ ಯತೀಂದ್ರ ಸಿದ್ದರಾಮಯ್ಯ ಅವರು ಫೋನ್ ಮೂಲಕ ಮಾತನಾಡುವ ವಿಡಿಯೋ ಕೂಡಾ ವೈರಲ್ ಆಗಿತ್ತು ಅದರ ವಿರುದ್ದವೂ ಶ್ಯಾಡೋ ಸಿಎಂ ಪೋಸ್ಟರ್ ಅಂಟಿಸಿ ಬಿಜೆಪಿ ವ್ಯಂಗ್ಯವಾಡಿದೆ.