ಬೆಂಗಳೂರು, ನ 19 (DaijiworldNews/PC): ಬೆಂಗಳೂರಿನ ವೈಟ್ಫೀಲ್ಡ್ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿದ್ದ ಘಟನೆ ನಡೆದಿತ್ತು.
ಬೆಸ್ಕಾಂಗೆ ಕರೆ ಮಾಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಯಾರೂ ಬಂದಿಲ್ಲ. ಸೂಕ್ತ ಸಮಯಕ್ಕೆ ಸ್ಥಳೀಯ ನಿವಾಸಿಗಳೂ ಸಹಾಯಕ್ಕೆ ಬಂದಿರಲಿಲ್ಲ. ಇದರಿಂದಾಗಿ ಕಣ್ಣ ಮುಂದೆ ಹೆಂಡತಿ, ಮಗು ಪ್ರಾಣಬಿಟ್ಟರೂ ಏನು ಮಾಡಲಾಗದ ಸ್ಥಿತಿಯಲ್ಲಿ ಸಂತೋಷ್ ಇದ್ದರು.
ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದು, ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304ಎ ಅಡಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ದೂರು ದಾಖಲಾಗಿದ್ದು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಬೆಸ್ಕಾಂನ ಐವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.