ಬೆಂಗಳೂರು, ನ 20 (DaijiworldNews/MS): ಬಿಜೆಪಿ ನಾಯಕ, ಮಾಜಿ ಸಚಿವ ಬಿ ಶ್ರೀರಾಮುಲು ಅವರು ಇಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಇದು ಹಲವರ ಕುತೂಹಲಕ್ಕೆ ಕಾರವಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗೆ ಕಾರಣವಾಗಿದೆ.
ಬಿಜೆಪಿ ಹೈಕಮಾಂಡ್ ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ನೇಮಿಸಿದ ಹಿನ್ನೆಲೆಯಲ್ಲಿಆ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಶ್ರೀರಾಮುಲು ಅವರು ಅಸಮಾಧಾನಗೊಳ್ಳುವಂತೆ ಮಾಡಿದೆ. ಹೀಗಾಗಿ ಈ ಭೇಟಿ ನಡೆದಿದೆ ಎಂಬ ಊಹಾಪೋಹ ಹರಡಿದೆ
ಆದರೆ ಮೂಲಗಳ ಪ್ರಕಾರ, ಶ್ರೀರಾಮುಲು ಅವರು ತಮ್ಮ ಮಗಳ ಮದುವೆಗೆ ಶಿವಕುಮಾರ್ ಅವರನ್ನು ಆಹ್ವಾನಿಸಲು ಅವರ ನಿವಾಸಕ್ಕೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.