ಚಿತ್ರದುರ್ಗ, ನ 21 (DaijiworldNews/HR): ಮುರುಘಾಶ್ರೀ ವಿರುದ್ಧದ ಪೋಕ್ಸೋ ಕೇಸ್ನ ಎಲ್ಲಾ ದಾಖಲಾತಿಗಳನ್ನು ಒಪ್ಪಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ಮುರುಘಾಶ್ರೀ ವಿರುದ್ಧದ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಏಕಸದಸ್ಯ ಪೀಠ, ಕೆಳ ನ್ಯಾಯಾಲಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಪೋಕ್ಸೋ ಕೇಸ್ನ ಎಲ್ಲಾ ದಾಖಲಾತಿಗಳನ್ನು ಒಪ್ಪಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ಇನ್ನು ನವೆಂಬರ್ 8 ರಂದು ಹೈಕೋರ್ಟ್ ಜಾಮೀನು ನೀಡಿದ್ದರೂ ನವೆಂಬರ್ 16ಕ್ಕೆ ಬಿಡುಗಡೆ ಆದೇಶ ನೀಡಿದ್ದು ಯಾಕೆ…? ಕೆಳಹಂತದ ನ್ಯಾಯಾಲಯದ ನಡೆ ಹೈಕೋರ್ಟ್ ಆದೇಶದ ನಿಯಮ ಉಲ್ಲಂಘನೆಯಾಗಿದೆ ಎಂದಿದೆ.
ಕೋರ್ಟ್ ಜಾಮೀನು ಆದೇಶ ನೀಡಿದ ನಂತರ ಬಾಡಿ ವಾರಂಟ್ ತಾನಾಗಿಯೇ ರದ್ದಾಗುತ್ತದೆ. ಚಿತ್ರದುರ್ಗಕ್ಕೆ ಪ್ರವೇಶಿಸದಂತೆ ಷರತ್ತು ಇದ್ದರೂ ವಾರಂಟ್ ಹೊರಡಿಸಿರೋದು ಸರಿಯಲ್ಲ. ಟ್ರಯಲ್ ಕೋರ್ಟ್ ಇರುವ ದಾಖಲೆಗಳನ್ನ ರಿಜಿಸ್ಟ್ರಾರ್ ತರಿಸಿ ಇಟ್ಟುಕೊಳ್ಳಬೇಕು. ತಕ್ಷಣ ಫೋನ್ ಮಾಡಿ ಕೋರ್ಟ್ ಮುಂದೆ ಇರುವ ಎಲ್ಲಾ ದಾಖಲೆ ಸೀಜ್ ಮಾಡಬೇಕು. ಎಸ್ಪಿಪಿ ವಿರುದ್ಧ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.