ಶ್ರೀನಗರ, ನ 22 (DaijiworldNews/AA) : ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ನಾಲ್ವರು ಸರ್ಕಾರಿ ಉದ್ಯೋಗಿಗಳನ್ನು ಸೇವೆಯಿಂದ ವಜಾಗೊಳಿಸಿದೆ.
ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಯೋಗಾಲಯ ಸಹಾಯಕ ಅಬ್. ಸಲಾಮ್ ರಾಥರ್, ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕ ಫಾರೂಕ್ ಅಹ್ಮದ್ ಮಿರ್, ಸಹಾಯಕ ಪ್ರಾಧ್ಯಾಪಕ ಡಾ. ನಿಸಾರ್-ಉಲ್-ಹಸನ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪೇದೆ ಅಬ್ದುಲ್ ಮಜೀದ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತವು ವಜಾಗೊಳಿಸಿದೆ.
ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಭಾರತದ ಸಂವಿಧಾನದ 311 ನೇ ವಿಧಿಯ ಷರತ್ತು (2) ರ ನಿಬಂಧನೆಯ ಉಪ-ಕಲಂ (ಸಿ) ಪ್ರಕಾರ ನಾಲ್ವರು ಸರ್ಕಾರಿ ಉದ್ಯೋಗಿಗಳನ್ನು ವಜಾಗೊಳಿಸಿದೆ.