ನವದೆಹಲಿ, ನ 22 (DaijiworldNews/AA) : ಪತಂಜಲಿ ಆಯುರ್ವೇದ ಉತ್ಪನ್ನಗಳ ಕುರಿತಂತೆ ಸುಳ್ಳು ಹಾಗೂ ಜನರ ಹಾದಿ ತಪ್ಪಿಸುವಂತಹ ಜಾಹೀರಾತುಗಳನ್ನು ನಿಲ್ಲಿಸದಿದ್ದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
ಯೋಗ ಗುರು ರಾಮ್ದೇವ್ ಅವರ ಪತಂಜಲಿ ಆಯುರ್ವೇದ್ ಕಂಪನಿಯು ಹಲವಾರು ಉತ್ಪನ್ನಗಳನ್ನು ಒಳಗೊಂಡಿದೆ. ಈ ಉತ್ಪನ್ನಗಳೆಲ್ಲವೂ ಗಿಡಮೂಲಿಕೆ ವಿಚಾರದಲ್ಲಿ ವ್ಯವಹಾರ ಮಾಡುತ್ತಿದೆ. ಇನ್ನು ಈ ಕಂಪನಿಯ ಹಲವಾರು ರೋಗಗಳಿಗೆ ಚಿಕಿತ್ಸೆ ನೀಡುವ ಔಷಧಿಗಳ ಬಗ್ಗೆ ಜಾಹೀರಾತುಗಳಲ್ಲಿ ಸುಳ್ಳು ಹಾಗೂ ಜನರ ಹಾದಿ ತಪ್ಪಿಸುವಂತಹ ಅಂಶಗಳೇ ಇವೆ.
ಒಂದು ನಿರ್ದಿಷ್ಟ ರೋಗವನ್ನು ಗುಣಪಡಿಸಬಹುದು ಎಂದು ಸುಳ್ಳು ಹೇಳಿಕೆ ನೀಡಿದರೆ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಸುಪ್ರಿಂ ಕೋರ್ಟ್ ತಿಳಿಸಿದೆ.
ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠ ಈ ಆದೇಶ ಹೊರಡಿಸಿದೆ.
ಪತಂಜಲಿ ಆಯುರ್ವೇದ್ ಕಂಪನಿ ಪತಂಜಲಿ ಆಯುರ್ವೇದ್ಗೆ ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ಸುಳ್ಳು ಹಾಗೂ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಈ ಕೂಡಲೇ ಪ್ರಸಾರ ಮಾಡುವುದನ್ನು ನಿಲ್ಲಿಸಬೇಕು ಅಥವಾ ಪ್ರಕಟಿಸಬಾರದು. ಅಂತಹ ಯಾವುದೇ ಉಲ್ಲಂಘನೆಯನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಎಚ್ಚರಿಕೆ ನೀಡಿದೆ.