ನವದೆಹಲಿ, ನ 23 (DaijiworldNews/HR): ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಮತ್ತೆ ಸೂಚನೆ ನೀಡಿದೆ.
ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ.
ಡಿಸೆಂಬರ್ ಅವಧಿಯಲ್ಲಿ ಹರಿಸಬೇಕಿದ್ದ 6 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಬೇಡಿಕೆ ಇಟ್ಟಿದ್ದು, ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ಹಾಗೂ ಡಿಸೆಂಬರ್ ನ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸಬೇಕೆಂದು ಪಟ್ಟು ಹಿಡಿದಿತ್ತು.