ರಜೌರಿ, ನ 23 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸೇನಾಪಡೆಗಳು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಗುರುವವಾರ ಹತ್ಯೆಗೈದಿದ್ದಾರೆ.
ಹತ್ಯೆಗೀಡಾದವರಲ್ಲಿ ಪಾಕಿಸ್ಥಾನದ ಎಲ್ ಇ ಟಿ ಕಮಾಂಡರ್ ಕ್ವಾರಿ ಎಂದು ಗುರುತಿಸಲಾಗದೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಇಬ್ಬರು ಸೇನಾ ಅಧಿಕಾರಿಗಳು ಸೇರಿ ಐವರು ಯೋಧರು ಹುತಾತ್ಮಾರಾಗಿದ್ದಾರೆ. ಗುರುವಾರ ಸಂಜೆ ನಾಲ್ವರು ಕೊನೆಯುಸಿರೆಳೆದಿದ್ದು , ಗಂಭೀರವಾಗಿ ಗಾಯಗೊಂಡಿದ್ದ ಯೋಧ ಉಧಮ್ ಪುರದ ಸೇನಾ ಆಸ್ಪತ್ರೆಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದಾರೆ.
ಇನ್ನು ರಾತ್ರಿಯಿಡೀ ಸ್ಥಗಿತಗೊಂಡಿದ್ದ ಗುಂಡಿನ ಚಕಮಕಿ ಗುರುವಾರ ಬೆಳಗ್ಗೆ ಪುನರಾರಂಭವಾಗಿತ್ತು.