ಕೋಲ್ಕತ್ತಾ, ನ 23 (DaijiworldNews/AA): ಪಾಪಿಗಳು ಹಾಜರಾದ ಪಂದ್ಯ ಬಿಟ್ಟು ಉಳಿದ ಎಲ್ಲಾ ಪಂದ್ಯಗಳಲ್ಲಿಯೂ ಭಾರತ ತಂಡ ಜಯಗಳಿಸಿದೆ. ವಿಶ್ವಕಪ್ 20203ರ ಫೈನಲ್ ಪಂದ್ಯವು ಕೋಲ್ಕತ್ತಾ ಅಥವಾ ಮುಂಬೈನಲ್ಲಿ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾರತದ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಪರೋಕ್ಷವಾಗಿ ದೂರಿದ್ದಾರೆ.
ಕೋಲ್ಕತ್ತಾದ ನೇತಾಜಿ ಇಂಡೋರ್ ಕ್ರೀಡಂಗಣದಲ್ಲಿ ನಡೆದ ಟಿಎಂಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೋಲ್ಕತ್ತಾದ ಈಡನ್ ಗಾರ್ಡನ್ ಅಥವಾ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದರೆ ನಾವು ಗೆಲ್ಲುತ್ತಿದ್ದೆವು. ಬಿಜೆಪಿಯವರು ಅವರಿಗೆ ಕೇಸರಿ ಜೆರ್ಸಿಯನ್ನು ನೀಡಿದ್ದಾರೆ. ಭಾರತೀಯ ಕ್ರಿಕೆಟ್ ಆಟಗಾರರು ಪಂದ್ಯದ ವೇಳೆ ಕೇಸರಿ ಜೆರ್ಸಿಗಳನ್ನು ಧರಿಸಲಿಲ್ಲ. ಆಟಗಾರರ ಜೆರ್ಸಿ ನೀಲಿ ಬಣ್ಣದ್ದಾಗಿದ್ದು, ಕ್ರಿಕೆಟ್ ಅಭ್ಯಾಸದ ವೇಳೆ ಕೇಸರಿ ಬಣ್ಣದ ಧರಿಸುತ್ತಿದ್ದರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಎಲ್ಲಾ ಫೆಡರೇಶನ್ಗಳನ್ನು ರಾಜಕೀಯ ಪಕ್ಷಗಳು ವಶಪಡಿಸಿಕೊಂಡಿದ್ದು, ಕ್ರಿಕೆಟ್ ಹಾಗೂ ಕಬಡ್ಡಿಯಲ್ಲಿಯೂ ಕೇಸರಿ ಬಣ್ಣವನ್ನು ಉಪಯೋಗಿಸಲಾಗುತ್ತದೆ. ಕೇಸರಿ ಬಣ್ಣವು ತ್ಯಾಗಿಗಳ ಬಣ್ಣವಾಗಿತ್ತು, ಆದರೆ ನೀವು ಭೋಗಿಗಳು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.