ತೆಲಂಗಾಣ , ನ 24 (DaijiworldNews/MS): ತೆಲಂಗಾಣ ವಿಧಾನಸಭೆ ಚುನಾವಣೆಗೆ ಒಂದು ವಾರ ಬಾಕಿ ಇರುವಂತೆಯೇ ಹೈದರಾಬಾದ್ ಪೊಲೀಸರು ಗುರುವಾರ ಗಚಿಬೌಲಿ ಪ್ರದೇಶದಲ್ಲಿ ವಾಹನ ತಪಾಸಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ರಹಿತ 5 ಕೋಟಿ ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಚುನಾವಣೆ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಎರಡು ಕಾರುಗಳಲ್ಲಿ ನಗದು ಸಾಗಿಸುತ್ತಿದ್ದ ಏಳು ಮಂದಿಯನ್ನು ಬಂಧಿಸಲಾಗಿದೆ. ಈ ಮೊತ್ತವನ್ನು ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಮತ್ತೊಂದು ಘಟನೆಯಲ್ಲಿ ಗುರುವಾರ ಹೈದರಾಬಾದ್ನ ಹಯಾತ್ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.
ಮಾದರಿ ನೀತಿ ಸಂಹಿತೆ ಜಾರಿಯಾದ ಅಕ್ಟೋಬರ್ 9 ರಿಂದ ಇದುವರೆಗೆ ಜಾರಿ ಸಂಸ್ಥೆಗಳು 657 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಗದು, ಅಮೂಲ್ಯ ಲೋಹಗಳು, ಮದ್ಯ, ಡ್ರಗ್ಸ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿವೆ.