ಕಲಬುರಗಿ, ನ 24 (DaijiworldNews/HR): ಅಕ್ಟೊಬರ್ 28ರಂದು ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಅಫಜಲಪುರದ ಆರ್.ಡಿ.ಪಾಟೀಲ್ ಗೆ ಕಲಬುರಗಿ ಪ್ರಧಾನ ಜೆಎಂಎಫ್ಸಿ ಕೋರ್ಟ್ ಇಂದು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೊಲೀಸ್ ಕಸ್ಟಡಿಯ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಕಲಬುರಗಿ ಪ್ರಧಾನ ಜೆಎಂಎಫ್ಸಿ ಕೋರ್ಟ್ ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇನ್ನು ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ಹಸ್ತಾಂತರಿಸಿದ್ದು, ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ತನಿಖೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು.