ಹೈದರಾಬಾದ್, ನ 30 (DaijiworldNews/HR): ತೆಲಂಗಾಣ ರಾಜ್ಯದಲ್ಲಿಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.
ಸಂಜೆ ವರೆಗೆ ಮತದಾನಕ್ಕೆ ಅವಕಾಶ ಸಿಗಲಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿರುವ 32.6 ದಶಲಕ್ಷ ಮತದಾರರು 2,290 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಸೇರಿದಂತೆ ಅನೇಕ ನಾಯಕರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಡ, ಮಿಜೋರಾಂಗಳಲ್ಲಿ ಈಗಾಗಲೇ ಮತದಾನ ನಡೆದಿದ್ದು, ಇಂದು ತೆಲಂಗಾಣದಲ್ಲಿಂದು ಮತದಾನ ನಡೆಯಲಿದೆ.
ಇನ್ನು ಪಂಚರಾಜ್ಯ ಚುನಾವಣೆಯ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟವಾಗಲಿದೆ.