ಹೊಸದಿಲ್ಲಿ, ಏ 17(Daijiworld News/SM): ಲೋಕಸಭಾ ಚುನಾವಣೆ ಆರಂಭಗೊಂಡಿದ್ದು, ‘ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರನ್ನು ಸಂಸತ್ತಿಗೆ ಕಳುಹಿಸಬೇಕು? ಎಂದು ಮತದಾರರು ನಿರ್ಧರಿಸಬೇಕಾಗಿದೆ ಎಂದು ಯೋಗ ಗುರು ಬಾಬಾ ರಾಮದೇವ್ ಹೇಳಿದ್ದಾರೆ. ಸಂಸತಿಗೆ ದೇಶ ರಕ್ಷಕರನ್ನೋ ಅಥವಾ ದೇಶದ ಶತ್ರುಗಳನ್ನು ಕಳುಹಿಸಬೇಕಾ ಎಂಬುದನ್ನು ಮತದಾರರು ತೀರ್ಮಾನಿಸಬೇಕಾಗಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಬೆಂಬಲವನ್ನು ವ್ಯಕ್ತಪಡಿಸಿದ ರಾಮದೇವ್, ದೇಶವು ಪ್ರಧಾನಿ ನರೇಂದ್ರ ಮೋದಿ ಕೈಯಲ್ಲಿ ಸುರಕ್ಷಿತವಾಗಿದೆ ಎಂದಿದ್ದಾರೆ.
‘ಈ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾರರು ಸರಿ ಮತ್ತು ತಪ್ಪನ್ನು ಆಯ್ಕೆ ಮಾಡಬೇಕಾಗಿದೆ. ಕಳೆದ ಐದು ವರ್ಷಗಳ ಆಡಳಿತೆಯಲ್ಲಿ ಪ್ರಧಾನಿ ಮೋದಿ ದೇಶದ ಅಭಿವೃದ್ಧಿಗಾಗಿ ಹಲವಾರು ಸಾಧನೆಗಳನ್ನು ಮಾಡಿದ್ದಾರೆ, ಹತ್ತು ಹಲವು ಕೊಡುಗೆಗಳನ್ನು ನೀಡಿದ್ದಾರೆ. ಆದರೆ ವಿಪಕ್ಷಗಳು ದೇಶಕ್ಕೆ ಒಳಿತಾಗುವ ಯಾವೊಂದು ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಅವರು ಟೀಕಿಸಿದ್ದಾರೆ.