ಬೆಂಗಳೂರು, ಡಿ 03 (DaijiworldNews/HR): ಇಡೀ ದೇಶದಲ್ಲಿ ವಾತಾವರಣ ಬಿಜೆಪಿ ಪರವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿ ಆಗುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗಬೇಕೆಂಬ ಆಸೆ ಜನತೆಯಲ್ಲಿ ಇದೆ ಎಂಬುದು ಇಂದಿನ ಚುನಾವಣಾ ಫಲಿತಾಂಶದಿಂದ ಗೊತ್ತಾಗಿದೆ ಎಂದರು.
ಇನ್ನು ಪಂಚರಾಜ್ಯ ಚುನಾವಣೆ ಒಂದು ರೀತಿಯ ಸೆಮಿ ಫೈನಲ್ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದ್ದಾರೆ.