ಬೆಂಗಳೂರು, ಡಿ 03 (DaijiworldNews/HR): ಸರ್ಕಾರಕ್ಕೆ ಚಾಟಿ ಬೀಸುವ ಕೆಲಸವನ್ನು ಜೆಡಿಎಸ್ ಬಿಜೆಪಿ ಒಟ್ಟಾಗಿ ಮಾಡುತ್ತೇವೆ. ಸರ್ಕಾರ, ಮಂತ್ರಿಗಳು ಬರ ನಿರ್ವಹಣೆಗೆ ಯಾವ ಕೆಲಸವನ್ನೂ ಮಾಡಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಡಿಸೆಂಬರ್ 4ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಶುರುವಾಗಲಿದ್ದು, ಬರ, ಕಾನೂನು ಸುವ್ಯವಸ್ಥೆ ವೈಫಲ್ಯ, ಶಾಲೆಗಳಿಗೆ ಹುಸಿ ಬಾಂಬ್ ಮೇಲ್, ಜಮೀರ್ ಅಹಮದ್ ಅಸಂಬದ್ಧ ಹೇಳಿಕೆ, ಎನ್ಇಪಿ ರದ್ದು, ಜಾತಿಜನಗಣತಿ ವರದಿ, ನೀರಾವರಿ ಯೋಜನೆಗಳು ವಿಚಾರಗಳಲ್ಲಿ ನಿಲುವಳಿ ಸೂಚನೆ ಮಂಡಿಸಿ ಚರ್ಚೆ ಮಾಡುತ್ತೇವೆ ಎಂದರಿ.
ಇನ್ನು ಬೆಳಗಾವಿ ಅಧಿವೇಶನ ಬಿಜೆಪಿ ಪಾಲಿಗೆ ಪ್ರಮುಖ ಅಧಿವೇಶನವಾಗಿದೆ. ಸರ್ಕಾರ ಬಂದಾಗಿಂದ ಅರವತ್ತು ತಪ್ಪುಗಳಾಗಿವೆ. ಬಂದ ಕೂಡಲೇ ವರ್ಗಾವಣೆ ಅಂಗಡಿ ತೆರೆದರು. ಐಟಿ ದಾಳಿಯಾಗಿ ಇವರ ಲೂಟಿ ಹಣ ಸಿಕ್ಕಿದೆ. ಈ ಬಗ್ಗೆ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿ, ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.