ಬೆಂಗಳೂರು, ಡಿ 5(DaijiworldNews/MS): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ರಾಜ್ಯದ ನೂತನ ಬಿಜೆಪಿ ಘಟಕದ ಅಧ್ಯಕ್ಷರಾಗಿರುವ ಬಿವೈ ವಿಜಯೇಂದ್ರ ಅವರ ಪತ್ನಿಯ ಸಹೋದರನ ಮನೆ ಸೇರಿದಂತೆ ರಾಜ್ಯದ 63 ಕಡೆ ದಾಳಿ ಮಾಡಿದ್ದಾರೆ.
ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ , ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ,ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್, ಬೆಸ್ಕಾಂ ಜಾಗೃತ ದಳ ಅಧಿಕಾರಿ T.N.ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಎಸ್.ಕೃಷ್ಣಮೂರ್ತಿ ಮುಂತಾವರ ಮನೆ , ಕಚೇರಿ ಹಾಗೂ ಇತರ ಆಸ್ತಿ ಪಾಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಯಾದಗಿರಿ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ.