ಚಿತ್ರದುರ್ಗ , ಡಿ 08 (DaijiworldNews/MS): ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆತನ್ನ ಇಬ್ಬರು ಮಕ್ಕಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಫಟ್ಟಿ ಗ್ರಾಮದಲ್ಲಿ ನಡೆದಿದೆ.
ಐದು ವರ್ಷದ ಪ್ರಣೀತಾ ಮತ್ತು ಮಗ ಜ್ಞಾನೇಶ್ವರ ಎಂಬ ಇಬ್ಬರು ಮಕ್ಕಳನ್ನು ತಾಯಿ ಲತಾ(25) ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಸಾಯಿಸಿದ್ದಾರೆ.
ದಾಂಪತ್ಯ ಕಲಹದಿಂದ ಲತಾ ಬೇಸತ್ತು ಹೋಗಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಜಾರಿದ್ದ ಲತಾ ಮನನೊಂದಿದ್ದರು. ಇಂದು ಏಕಾಏಕಿ ತನ್ನಿಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ, ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಳ್ಳಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.