ಹಾಸನ, ಡಿ 10 (DaijiworldNews/SK): ಕುಮಾರಸ್ವಾಮಿ ಇನ್ನೂ ತಿರುಕನ ಕನಸು ಕಾಣುತ್ತಿದ್ದಾರೆ. ಅವರ ಬಳಿ ಮಾತನಾಡಲು ವಿಷಯ ಇಲ್ಲದ ಕಾರಣ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ಕಾಂಗ್ರೆಸ್ ನಾಯಕರೊಬ್ಬರು ಬಿಜೆಪಿ ಮುಂಖಡರನ್ನು ಭೇಟಿಯಾಗಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕೆ ಹೇಳಿಕೆಗೆ ತೀರುಗೇಟು ನೀಡಿದ್ದಾರೆ.
ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಮಾಡಲು ಯಾವುದೇ ಕೆಲಸವೂ ಇಲ್ಲ ಹಾಗಾಗೀ ಈ ಹೇಳಿಕೆಯನ್ನು ನೀಡಿದ್ದಾರೆ. ಇನ್ನು ರಾಜ್ಯದಲ್ಲಿ ಬರ ಪರಿಸ್ಥಿತಿಯಿದ್ದರೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ. ಈ ಬಗ್ಗೆ ಮಾತನಾಡುವುದು ಬಿಟ್ಟು ಊಳಿದೆಲ್ಲ ವಿಷಯವನ್ನು ಚರ್ಚಿಸುತ್ತಿದ್ದಾರೆ ಎಂದರು.
ನಮ್ಮ ಪಕ್ಷವನ್ನು ಜನರು ಬಹುಮತದಿಂದ ಆಯ್ಕೆ ಮಾಡಿದ್ದಾರೆ. ಅವರು ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಎಂದು ಹುಸಿ ಆಗಲು ಬಿಡುವುದಿಲ್ಲ. ಎಲ್ಲಾ ಗ್ಯಾರೆಂಟಿಗಳನ್ನು ಕೂಡ ಈಗಾಗಲೇ ಅನುಷ್ಠಾನ ಕೂಡ ಮಾಡಿದ್ದೇವೆ. ಇನ್ನು 136 ಪಕ್ಷದ ಶಾಸಕರು ಒಗ್ಗಟ್ಟಾಗಿ ಐದು ವರ್ಷ ಉತ್ತಮ ಆಡಳಿತ ನಡೆಸುತ್ತೇವೆ ಎಂದರು.