ಬೆಂಗಳೂರು, ಡಿ 11 (DaijiworldNews/PC): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು. ಇಲ್ಲಿಯವರೆಗೆ 15 ಸಾವಿರದ ಪ್ರಕರಣಗಳ ಗಡಿ ದಾಟಿದೆ. ಈಗಾಗಲೇ ಡೆಂಗ್ಯೂ ನಿಂದಾಗಿ 9 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ರಾಜ್ಯದಲ್ಲಿ ಒಟ್ಟು 15,089 ಮಂದಿ ಡೆಂಗ್ಯೂಗೆ ತುತ್ತಾಗಿದ್ದಾರೆ. ಇದರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಹಾಗೂ ಕೊಡಗು, ಹಾಸನ, ತುಮಕೂರು ವ್ಯಾಪ್ತಿಯಲ್ಲಿ ತಲಾ ಒಬ್ಬರು, ಉಡುಪಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 2021ರಲ್ಲಿ 6,300 ಪ್ರಕರಣ ದಾಖಲಾಗಿದ್ದು, ಐವರು ಮೃತಪಟ್ಟಿದ್ದರು. 2022ರಲ್ಲಿ 8,500 ಪ್ರಕರಣ ಪಾಸಿಟಿವ್ ಇದ್ದು, 9 ಮಂದಿ ಸಾವಿಗೀಡಾಗಿದ್ದರು.ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಏರಿಕೆಯಾಗುತ್ತಿವೆ. ಕೇವಲ ಆರೋಗ್ಯ ಇಲಾಖೆಯಿಂದ ಮಾತ್ರ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಸಾರ್ವಜನಿಕರೂ ಸಹಕಾರ ನೀಡಬೇಕು ಎಂದು ಡಾ| ಸುದರ್ಶನ ಬಲ್ಲಾಳ್, ಮಣಿಪಾಲ ಆಸ್ಪತ್ರೆ ಅಧ್ಯಕ್ಷ ಮಾಹಿತಿಯನ್ನು ನೀಡಿದ್ದಾರೆ.