ಅಹಮದಾಬಾದ್,ಡಿ 13 (DaijiworldNews/PC): ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಭೂಪೇಂದ್ರ ಭಯಾನಿ ಅವರು ವಿಧಾನಸಭಾ ಸದಸ್ಯತ್ವ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.
ರಾಜಿನಾಮೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಜನ ಸೇವೆ ಮಾಡಲು ಆಪ್ ಸರಿಯಾದ ವೇದಿಕೆಯಲ್ಲ. ಶೀಘ್ರದಲ್ಲೇ ಆಡಳಿತಾರೂಢ ಬಿಜೆಪಿಗೆ ಸೇರುತ್ತೇನೆ ಎಂದು ಹೇಳಿದ್ದಾರೆ.
ಭೂಪೇಂದ್ರ ಭಯಾನಿ ಅವರು ಸ್ಪೀಕರ್ ಶಂಕರ್ ಚೌಧರಿ ಅವರಿಗೆ ರಾಜೀನಾಮೆ ನೀಡಿದ್ದು, ನಿರ್ಧಾರದ ಹಿಂದೆ ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ. ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ ಎಂದು ಗುಜರಾತ್ ವಿಧಾನಸಭೆ ಕಾರ್ಯದರ್ಶಿ ಡಿಎಂ ಪಟೇಲ್ ಹೇಳಿದ್ದಾರೆ.